ಗದಗ: ಲಕ್ಷ್ಮೇಶ್ವರ ಪಟ್ಟಣದಲ್ಲಿ ಪೊಲೀಸ್ ಠಾಣೆಯಿಂದ ಕೂಗಳತೆಯ ದೂರದಲ್ಲೇ ರೌಡಿ ಶೀಟರ್ ಇರ್ಫಾನ್ ತಹಶೀಲ್ದಾರ್ (32) ಎಂಬಾತನನ್ನು ಮೂವರು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸೆ.23ರಂದು ಹಾಡಹಗಲೇ ನಡೆದ ಈ ಘಟನೆ ತಟ್ಟಿ ಲೇಔಟ್‌ನಲ್ಲಿ ನಡೆದಿದೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಮಹ್ಮದ್ ಶಫಿನ್, ಆಯಾಜ್ ಮುಲ್ಲಾ ಹಾಗೂ ಮಹ್ಮದ್ ವಾಸಿಮ್ ಮುಲ್ಲಾ ಎಂಬವರ ಮೇಲೆ ಆರೋಪ ಕೇಳಿಬಂದಿದೆ. ಇರ್ಫಾನ್‌ನ ಕೈಗಳನ್ನು ಕಟ್ಟಿ, ಚಾಕುವಿನಿಂದ ಮುಖ ಹಾಗೂ ಕುತ್ತಿಗೆಗೆ ಇರಿದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಘಟನೆ ಬಳಿಕ ಲಕ್ಷ್ಮೇಶ್ವರ ಪೊಲೀಸರು ಹಾಗೂ ಗದಗ ಎಸ್ಪಿ ಮಿಥುನ್ ಎಚ್.ಎನ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
