Breaking News

ಮಾದಕ ವಸ್ತು ಪ್ರಕರಣ: ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; 9 ಮಂದಿ ಬಂಧನ

ಉಡುಪಿ: ಶಿರ್ವ ಹಾಗೂ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 9 ಮಂದಿಯನ್ನು ಬಂಧಿಸಿ, ಗಾಂಜಾ, ಮೆಥಾಂಫೆಟಮೈನ್, ನಗದು ಹಾಗೂ ವಾಹನಗಳು ಸೇರಿದಂತೆ ₹16.01 ಲಕ್ಷ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿರ್ವ ಠಾಣಾ ವ್ಯಾಪ್ತಿಯಲ್ಲಿ 8 ಮಂದಿಯನ್ನು ಬಂಧಿಸಿ, 1.35 ಕೆಜಿ ಗಾಂಜಾ, 32.74 ಗ್ರಾಂ ಮೆಥಾಂಫೆಟಮೈನ್, ಎರಡು ಕಾರು, ಸ್ಕೂಟರ್, 9 ಮೊಬೈಲ್‌ಗಳು ಹಾಗೂ ₹75,010 ನಗದು ಜಪ್ತಿ ಮಾಡಲಾಗಿದೆ. ಆರೋಪಿಗಳು ಕೇರಳದ ಉಪ್ಪಳದಿಂದ ಗಾಂಜಾ ತರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಶ್ರೀವತ್ಸ ಕೆ.ಜಿ. (31) ಎಂಬಾತನನ್ನು ಬಂಧಿಸಿ, 1.65 ಕೆಜಿ ಗಾಂಜಾ ಹಾಗೂ ₹1.26 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತರಲ್ಲಿ ಕೆಲವರ ವಿರುದ್ಧ ವಿವಿಧ ಠಾಣೆಗಳಲ್ಲಿ ಈ ಹಿಂದೆಯೇ ಪ್ರಕರಣಗಳು ದಾಖಲಾಗಿವೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *