Breaking News

ಪಡುವನ್ನೂರು: ಅಕ್ರಮ ದನ ಸಾಗಾಟ; ಪ್ರಕರಣ ದಾಖಲು

ಪುತ್ತೂರು: ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ಪಿಕಪ್ ವಾಹನದಲ್ಲಿ ದನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಕಾಸರಗೋಡಿನ ಸೀತಾರಾಮ ಹಾಗೂ ಮುಳಿಯಾರಿನ ಕೇಲು ಮಣಿಯಾಣಿ ಎಂದು ಗುರುತಿಸಲಾಗಿದೆ. ಪೊಲೀಸರು ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ ಯಾವುದೇ ದಾಖಲೆಗಳಿಲ್ಲದೆ ದನ ಸಾಗಿಸುತ್ತಿರುವುದು ಪತ್ತೆಯಾಗಿದೆ. ದನವನ್ನು ದರ್ಬೆತ್ತಡ್ಕದ ಕೊಟ್ಟಿಗೆಯಿಂದ ದೇವಸ್ಯ ಸಮೀಪದ ಕೋರಮೂಲೆ ಕಡೆಗೆ ಕೊಂಡೊಯ್ಯಲಾಗುತ್ತಿತ್ತು ಎಂದು ಆರೋಪಿಗಳು ತಿಳಿಸಿದ್ದಾರೆ. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *