ಮಂಗಳೂರು: ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಸುಭಾಷ್ (36) ಎಂಬಾತನನ್ನು ಬಂಧಿಸಿದ್ದಾರೆ. ಅರ್ಕುಳ ಜಂಕ್ಷನ್ ಬಳಿ ಸೆ.23ರಂದು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ. ಆರೋಪಿಯಿಂದ ₹1.15 ಲಕ್ಷ ಮೌಲ್ಯದ 23.20 ಗ್ರಾಂ ಎಂಡಿಎಂಎ, ಎರಡು ಮೊಬೈಲ್‌ಗಳು ಹಾಗೂ ತೂಕದ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮಾದಕ ದ್ರವ್ಯ ಮಾರಾಟ ಜಾಲದಲ್ಲಿ ಇತರರು ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

