ಬೆಂಗಳೂರು: ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದಾಗಲೇ ಕಳ್ಳತನಕ್ಕೆ ಇಳಿದಿದ್ದ ಹೈಟೆಕ್ ಕಳ್ಳನೊಬ್ಬ ವಿಮಾನದಲ್ಲಿ ನಗರಕ್ಕೆ ಬಂದು ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ಪರಾರಿಯಾಗುತ್ತಿದ್ದ ಪ್ರಕರಣವನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಭೇದಿಸಿದ್ದಾರೆ. ತೆಲಂಗಾಣದ ನಲ್ಲೂರು ನಿವಾಸಿ ವಿನೋದ್ ಕುಮಾರ್ (32) ಆರೋಪಿಯಾಗಿದ್ದು, ಬೆಂಗಳೂರಿಗೆ ವಿಮಾನದಲ್ಲಿ ಬಂದು ಕಳ್ಳತನ ಮಾಡಿ ಹೈದರಾಬಾದ್‌ಗೆ ವಾಪಸ್ ತೆರಳುತ್ತಿದ್ದ. ದೆಹಲಿಗೆ ತೆರಳಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ 20 ದಿನಗಳ ಹಿಂದಷ್ಟೇ ವಾರಾಣಸಿ ಜೈಲಿನಿಂದ ಬಿಡುಗಡೆಯಾಗಿದ್ದ ಎಂಬುದು ತಿಳಿದುಬಂದಿದೆ. ತೆಲಂಗಾಣದಲ್ಲಿ 28, ಉತ್ತರ ಪ್ರದೇಶದಲ್ಲಿ ಒಂದು ಹಾಗೂ ಬೆಂಗಳೂರಿನಲ್ಲಿ ಒಂದು ಸೇರಿದಂತೆ ಒಟ್ಟು 30 ಪ್ರಕರಣಗಳು ಆತನ ವಿರುದ್ಧ ದಾಖಲಾಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

