Breaking News

ಕ್ರಿಮಿನಾಶಕ ಕಾಳು ಸೇವಿಸಿ ಗೃಹಿಣಿ ಆತ್ಮಹತ್ಯೆ: ಮೂವರ ವಿರುದ್ಧ ಪ್ರಕರಣ ದಾಖಲು, ಓರ್ವನ ಬಂಧನ

ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ಗೃಹಿಣಿ ಸಿಂಧೂ (26) ಕ್ರಿಮಿನಾಶಕ ಮಾತ್ರೆ ಸೇವಿಸಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಲ್.ಕೆ. ವಿಕಾಸ್ ಎಂಬಾತನನ್ನು ಬಿಳಿಕೆರೆ ಪೊಲೀಸರು ಬಂಧಿಸಿದ್ದಾರೆ. ಪತಿ ಶ್ರೀಕಾಂತ್ ನೀಡಿದ ದೂರಿನ ಪ್ರಕಾರ, ಸಿಂಧೂ ಹಾಗೂ ವಿಕಾಸ್ ನಡುವೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಸಾವಿಗೂ ಮುನ್ನ ಸಿಂಧೂ, ತನ್ನ ಸಾವಿಗೆ ವಿಕಾಸ್ ಕಾರಣ ಎಂದು ತಿಳಿಸಿದ್ದರು. ಕ್ರಿಮಿನಾಶಕ ಸೇವಿಸುವ ಮುನ್ನ ವಿಕಾಸ್ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿರುವುದು ಮೊಬೈಲ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ವಿಕಾಸ್‌ನ ಪ್ರಚೋದನೆಯಿಂದಲೇ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶ್ರೀಕಾಂತ್ ಆರೋಪಿಸಿದ್ದಾರೆ. ವಿಕಾಸ್‌ನ ತಂದೆ-ತಾಯಿಗೂ ಸಹಕಾರವಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ …

Leave a Reply

Your email address will not be published. Required fields are marked *