ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ಬಳಿ ಊಟ ಖಾಲಿಯಾಗಿದೆ ಎಂದಿದ್ದಕ್ಕೆ ಡಾಬಾ ಮಾಲೀಕ ಮೆಹಬೂಬಸಾಬ್ ಪಟ್ಟೆವಾಲೆ (58) ಮೇಲೆ ಪರಪ್ಪನ ಅಗ್ರಹಾರ ಜೈಲಿನ ಹೆಡ್ ವಾರ್ಡರ್ ಅಡಿವೆಪ್ಪ ಹಲ್ಲೆ ನಡೆಸಿದ್ದಾನೆ. ಸೆ.17ರಂದು ನಡೆದ ಹಲ್ಲೆಯಲ್ಲಿ ಮೆಹಬೂಬಸಾಬ್ ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಸೆ.24ರಂದು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಲಾದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಹೆಡ್ ವಾರ್ಡರ್ ಅಡಿವೆಪ್ಪನನ್ನು ಬಂಧಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

