Breaking News

ರೌಡಿಗಳೊಂದಿಗೆ ಎಣ್ಣೆ ಪಾರ್ಟಿ ಮಾಡಿದ ಎಎಸ್‌‍ಐ ಅಮಾನತು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯ ಎಎಸ್‌ಐ ವೀರೇಂದ್ರ ಅವರನ್ನು ರೌಡಿ ಶೀಟರ್‌ಗಳ ಜೊತೆ ಮದ್ಯಪಾನ ಕೂಟ ಆಯೋಜಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಸುಮಾರು ಒಂದು ವಾರದ ಹಿಂದೆ ಎಮೆದೊಡ್ಡಿ ಸಮೀಪದ ಮುಸ್ಲಾಪುರ ಗ್ರಾಮದ ಬಾರ್‌ನಲ್ಲಿ ವೀರೇಂದ್ರ ಅವರು ರೌಡಿ ಶೀಟರ್‌ಗಳೊಂದಿಗೆ ಪಾರ್ಟಿ ನಡೆಸಿದ್ದು, ತಡರಾತ್ರಿವರೆಗೂ ಜೋರಾಗಿ ಸಂಗೀತ ಹಾಕಿದ್ದರು ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಮಹಿಳೆಯರು ಬಾರ್‌ ಎದುರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಅವರು ಎಎಸ್‌ಐ ವೀರೇಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶಿಸಿದ್ದಾರೆ.

Share News

About BigTv News

Check Also

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ …

Leave a Reply

Your email address will not be published. Required fields are marked *