Breaking News

ಬೆಂಗಳೂರು: ಒಂದು ವರ್ಷದಲ್ಲಿ 170ಕ್ಕೂ ಹೆಚ್ಚು ಬಾರಿ ಕಳ್ಳತನ; ಮನೆಗೆಲಸದಾಕೆ ಬಂಧನ

ಬೆಂಗಳೂರು: ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆಗೆಲಸದಾಕೆ ಮಾಲೀಕರಿಗೆ ತಿಳಿಯದಂತೆ ಕಳೆದೊಂದು ವರ್ಷದಲ್ಲಿ 170ಕ್ಕೂ ಹೆಚ್ಚು ಬಾರಿ ಚಿನ್ನಾಭರಣ ಕದ್ದಿದ್ದಾಳೆ ಎನ್ನಲಾಗಿದೆ. ಪರಮೇಶ್ವರಿ ಬಂಧಿತ ಆರೋಪಿ. ಮಡಿವಾಳದ ಸೆಂಟ್ ಥಾಮಸ್ ನಗರದಲ್ಲಿರುವ ಉದ್ಯಮಿಯ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಈಕೆ, ಸ್ವಲ್ಪಸ್ವಲ್ಪವಾಗಿ ಚಿನ್ನಾಭರಣ ಕದ್ದಿದ್ದಳು. ಅನುಮಾನಗೊಂಡ ಮಾಲೀಕರು ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಕದ್ದ ಚಿನ್ನವನ್ನು ಮಡಿವಾಳದ ಗಿರವಿ ಅಂಗಡಿಯೊಂದರಲ್ಲಿ ಅಡವಿಟ್ಟಿದ್ದಳು ಎನ್ನಲಾಗಿದ್ದು, ಸುಮಾರು ₹25 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ …

Leave a Reply

Your email address will not be published. Required fields are marked *