Breaking News

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದೂರುದಾರ ಅನೂಪ್ ನೀಡಿದ ಮಾಹಿತಿಯ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹಣ ಸ್ವೀಕರಿಸುತ್ತಿದ್ದ ವೇಳೆ ಅಶೋಕ್ ಕುಮಾರ್ ಅವರನ್ನು ಹಣಸಮೇತ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Share News

About BigTv News

Check Also

ಬೆಂಗಳೂರು: ಒಂದು ವರ್ಷದಲ್ಲಿ 170ಕ್ಕೂ ಹೆಚ್ಚು ಬಾರಿ ಕಳ್ಳತನ; ಮನೆಗೆಲಸದಾಕೆ ಬಂಧನ

ಬೆಂಗಳೂರು: ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆಗೆಲಸದಾಕೆ ಮಾಲೀಕರಿಗೆ ತಿಳಿಯದಂತೆ ಕಳೆದೊಂದು ವರ್ಷದಲ್ಲಿ 170ಕ್ಕೂ ಹೆಚ್ಚು ಬಾರಿ ಚಿನ್ನಾಭರಣ ಕದ್ದಿದ್ದಾಳೆ …

Leave a Reply

Your email address will not be published. Required fields are marked *