Breaking News

ಶ್ರೀನಿವಾಸ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್‌ ಆರೋಪ: ಒಂಭತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ನಗರದ ಪಾಂಡೇಶ್ವರದ ಶ್ರೀನಿವಾಸ ವಿಶ್ವವಿದ್ಯಾಲಯದ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ನಡೆಸಿದ ಆರೋಪದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆ.19ರಂದು ಇಬ್ಬರು ವಿದ್ಯಾರ್ಥಿಗಳನ್ನು ಬೈಕ್‌ನಲ್ಲಿ ಕರೆದೊಯ್ದು ಮನೆಯೊಂದರ ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನೀರು ಕೇಳಿದಾಗ ಕಲುಷಿತ ನೀರು ನೀಡಿದ್ದು, ಕುಡಿಯದಿದ್ದಾಗ ಮೈಗೆ ಚೆಲ್ಲಿದ್ದಾರೆ ಎನ್ನಲಾಗಿದೆ. ಕ್ಲೀನ್ ಶೇವ್ ಮಾಡಿಕೊಂಡು ಕಾಲೇಜಿಗೆ ಬರಬೇಕು ಹಾಗೂ ಶೂ ಧರಿಸಬಾರದು ಎಂದು ಹಿರಿಯ ವಿದ್ಯಾರ್ಥಿಗಳು ಒತ್ತಾಯಿಸಿದ್ದರು ಎಂದು ವಿದ್ಯಾರ್ಥಿಗಳು ಸೆ.23ರಂದು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ನಾಸಿದ್ ಅಮೀರ್ ಸೇರಿದಂತೆ 9 ಮಂದಿ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರು: ಒಂದು ವರ್ಷದಲ್ಲಿ 170ಕ್ಕೂ ಹೆಚ್ಚು ಬಾರಿ ಕಳ್ಳತನ; ಮನೆಗೆಲಸದಾಕೆ ಬಂಧನ

ಬೆಂಗಳೂರು: ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆಗೆಲಸದಾಕೆ ಮಾಲೀಕರಿಗೆ ತಿಳಿಯದಂತೆ ಕಳೆದೊಂದು ವರ್ಷದಲ್ಲಿ 170ಕ್ಕೂ ಹೆಚ್ಚು ಬಾರಿ ಚಿನ್ನಾಭರಣ ಕದ್ದಿದ್ದಾಳೆ …

Leave a Reply

Your email address will not be published. Required fields are marked *