Breaking News

ಸಿಲ್ಲಿ ಮ್ಯಾಟರ್ : ಇಬ್ಬರ ಜಗಳದಲ್ಲಿ ಮೂರನೆಯವನ ಬಲಿ

ನೆಲಮಂಗಲ: ಜಗಳ ಬಿಡಿಸಲು ಬಂದಿದ್ದ ಜೀವನ್ (29) ಎಂಬಾತನಿಗೆ ಚಾಕುವಿನಿಂದ ಇರಿದ ಪರಿಣಾಮ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಟಿ. ದಾಸರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ. ನಾಲ್ಕು ದಿನಗಳ ಹಿಂದೆ ಬಾರ್‌ನಲ್ಲಿ ನಡೆದ ಗಲಾಟೆಯನ್ನು ಜೀವನ್ ಬಿಡಿಸಿ ಕಳುಹಿಸಿದ್ದರು. ಬಳಿಕ ಬಾರ್‌ ಮುಂದೆ ನಿಂತಿದ್ದ ವೇಳೆ ಮಹಮದ್ ಗೌಸ್ ಹಾಗೂ ವಸೀಂ ಬೈಕ್‌ನಲ್ಲಿ ಬಂದು ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಜೀವನ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಲ್ಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಒಂದು ವರ್ಷದಲ್ಲಿ 170ಕ್ಕೂ ಹೆಚ್ಚು ಬಾರಿ ಕಳ್ಳತನ; ಮನೆಗೆಲಸದಾಕೆ ಬಂಧನ

ಬೆಂಗಳೂರು: ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆಗೆಲಸದಾಕೆ ಮಾಲೀಕರಿಗೆ ತಿಳಿಯದಂತೆ ಕಳೆದೊಂದು ವರ್ಷದಲ್ಲಿ 170ಕ್ಕೂ ಹೆಚ್ಚು ಬಾರಿ ಚಿನ್ನಾಭರಣ ಕದ್ದಿದ್ದಾಳೆ …

Leave a Reply

Your email address will not be published. Required fields are marked *