Breaking News

ಮಣಿಪುರದಲ್ಲಿ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಉಡುಪಿ ಸಮೀಪದ ಮಣಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೆಂದೂರು ಕಟ್ಟೆಯಲ್ಲಿ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ಗೆ ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಪೆಟ್ರೋಲ್ ಪಂಪ್ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ್ದಾರೆ. ಬಸ್‌ ಸಮೀಪವೇ ಇನ್ನೆರಡು ಬಸ್‌ಗಳು ಹಾಗೂ ಟೆಂಪೋ ನಿಲ್ಲಿಸಿದ್ದರಿಂದ ದೊಡ್ಡ ಅನಾಹುತದ ಸಾಧ್ಯತೆ ಇತ್ತು. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಅಪಾಯ ತಪ್ಪಿದೆ. ಘಟನೆಯಲ್ಲಿ ಬಸ್‌ಗೆ ಭಾರೀ ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *