ದಕ್ಷಿಣ ಕನ್ನಡದ ವಿಟ್ಲ ಪಟ್ಟಣದ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರು ಸೆ.9ರಂದು ಮಗುವಿಗೆ ಜನ್ಮ ನೀಡಿದ್ದಾರೆ. ಸೆ.8ರಂದು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಕೇರಳ ಮೂಲದ ಅಪ್ರಾಪ್ತ ಬಾಲಕನೊಬ್ಬ ಮೊಬೈಲ್ ಮೂಲಕ ವಿದ್ಯಾರ್ಥಿನಿಗೆ ಪರಿಚಯವಾಗಿ, 2025ರ ಡಿ.21ರಂದು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

