Breaking News

ಸಂಪಿಗೆಹಳ್ಳಿ ಕೊಲೆ ಕೇಸ್ ಬೇಧಿಸಿದ ಖಾಕಿ.. ಖಾಲಿ ಸೈಟ್ ಮರ್ಡರ್ ಮಿಸ್ಟರಿ ಏನು ಗೊತ್ತಾ..?

ಬೆಂಗಳೂರು ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ಸೈಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಶವದ ಮೇಲಿದ್ದ ಬಟ್ಟೆಯ ಟ್ಯಾಗ್ ಹಾಗೂ ಅದರ ಬಿಲ್ ಆಧರಿಸಿ ಮೃತಳ ಗುರುತು ಪತ್ತೆಹಚ್ಚಿ, ಕೊಲೆ ನಡೆದ 20 ದಿನಗಳ ಬಳಿಕ ಪತಿ ಸಾಗರ್ ಚಂದ್ರ ರಾವತ್ (32)ನನ್ನು ಬಂಧಿಸಿದ್ದಾರೆ. ಒಡಿಶಾ ಮೂಲದ ಸಾಗರ್ ಮತ್ತು ಅನುಸೂಯ (28) ಪ್ರೀತಿಸಿ ಮದುವೆಯಾಗಿದ್ದರು. ಆಗಸ್ಟ್ 11ರಂದು ಹಣಕಾಸಿನ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದ್ದು, ಈ ವೇಳೆ ಸಾಗರ್ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಮೂರು ದಿನ ಶವದ ಜೊತೆಯೇ ಮನೆಯಲ್ಲಿದ್ದು, ಹಾಸಿಗೆಯಲ್ಲಿ ಸುತ್ತಿ ಖಾಲಿ ಸೈಟ್‌ನ ಪೊದೆಯೊಳಗೆ ಎಸೆದಿದ್ದಾನೆ. ಸೊಳ್ಳೆ ಹಾಗೂ ತ್ಯಾಜ್ಯ ಸಮಸ್ಯೆ ಹಿನ್ನೆಲೆಯಲ್ಲಿ ಖಾಲಿ ಸೈಟ್‌ಗಳನ್ನು ಸ್ವಚ್ಛಗೊಳಿಸುವ ಕಾರ್ಯಾಚರಣೆ ವೇಳೆ ಕಾರ್ಮಿಕರಿಗೆ ಶವ ಪತ್ತೆಯಾಗಿತ್ತು. ಸಂಪಿಗೆಹಳ್ಳಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *