ಚಿಕ್ಕಬಳ್ಳಾಪುರ ನಗರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ಬಾಪೂಜಿನಗರದ ಶಬ್ಬೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಟೆಲಿಗ್ರಾಂ ಗ್ರೂಪ್ ಮೂಲಕ ಭಯೋತ್ಪಾದನಾ ಚಟುವಟಿಕೆಗಳ ಕುರಿತು ಚರ್ಚೆ ನಡೆಸುತ್ತಿದ್ದ ಆರೋಪ ಕೇಳಿಬಂದಿದೆ. ಗ್ರೂಪ್‌ನಲ್ಲಿ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ್, ಸಿ.ಟಿ. ರವಿ ಹಾಗೂ ಪ್ರತಾಪ್ ಸಿಂಹ ಸೇರಿದಂತೆ ಕೆಲವರನ್ನು ಹತ್ಯೆ ಮಾಡುವ ಕುರಿತು ಚರ್ಚೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀಮಂತರನ್ನು ಅಪಹರಿಸಿ ಹಣ ಸಂಗ್ರಹಿಸಿ ವಿಧ್ವಂಸಕ ಕೃತ್ಯಗಳಿಗೆ ಬಳಸುವ ಬಗ್ಗೆಯೂ ಚರ್ಚೆ ನಡೆದಿತ್ತು ಎನ್ನಲಾಗಿದೆ. ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸರು ಬಿಎನ್‌ಎಸ್ 113ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಗ್ರೂಪ್‌ನಲ್ಲಿದ್ದ ಇತರರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

