Breaking News

ಶಾಲಾ ಮಕ್ಕಳ ಜೊತೆ ಅನುಚಿತ ವರ್ತನೆ! ನಿವೃತ್ತಿಯ ಅಂಚಿನಲ್ಲಿದ್ದ ಶಿಕ್ಷಕ ಅರೆಸ್ಟ್

ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ 59 ವರ್ಷದ ಮುಖ್ಯ ಶಿಕ್ಷಕ ರಾಮಶೆಟ್ಟಿಯನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಮಕ್ಕಳ ಗುಪ್ತಾಂಗ ಸ್ಪರ್ಶಿಸಿ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೋಷಕರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಮಕ್ಕಳಿಂದ ಹೇಳಿಕೆ ಪಡೆದ ಬಳಿಕ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು. 30 ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ರಾಮಶೆಟ್ಟಿ ನಿವೃತ್ತಿಯ ಅಂಚಿನಲ್ಲಿದ್ದರು. ಬಂಧನದ ಬಳಿಕ ಶಿಕ್ಷಣ ಇಲಾಖೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪತಿ ಬಟ್ಟೆಯಲ್ಲಿದ್ದ ‘ಬಾರ್‌ ಕೋಡ್‌’ ಕೊಟ್ಟ ಸುಳಿವು!

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ನಿವೇಶನದಲ್ಲಿ ಎಸೆದಿದ್ದ ಆರೋಪದ ಮೇಲೆ ಸಂಪಿಗೆಹಳ್ಳಿ …

Leave a Reply

Your email address will not be published. Required fields are marked *