Breaking News

ಖಾಸಗಿ ಫೋಟೋ ಇಟ್ಟುಕೊಂಡು ಮಹಿಳೆಗೆ ಬ್ಲಾಕ್‌ಮೇಲ್: ಟ್ಯಾಟೂ ಆರ್ಟಿಸ್ಟ್ ಅರ್ಜುನ್ ವಿರುದ್ಧ ಎಫ್‌ಐಆರ್

ಬೆಂಗಳೂರು, ಸೆ.25: ಮಹಿಳೆಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಹಂತ ಹಂತವಾಗಿ ₹9 ಲಕ್ಷ ಸುಲಿಗೆ ಮಾಡಿದ ಆರೋಪದ ಮೇಲೆ ಅರ್ಜುನ್ ಅಲಿಯಾಸ್ ಟ್ಯಾಟೊ ಘೋಸ್ಟ್ ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎರಡು ವರ್ಷಗಳ ಹಿಂದೆ ಟ್ಯಾಟೊ ಹಾಕಿಸಿಕೊಳ್ಳಲು ತೆರಳಿದ್ದ ವೇಳೆ ಅರ್ಜುನ್ ಪರಿಚಯವಾಗಿದ್ದು, ಬಳಿಕ ಸ್ನೇಹ ಬೆಳೆದಿತ್ತು. ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಸಲುಗೆಯಿಂದ ಇದ್ದ ವೇಳೆ ಖಾಸಗಿ ಫೋಟೋಗಳನ್ನು ತೆಗೆದುಕೊಂಡಿದ್ದ. ಬಳಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹9 ಲಕ್ಷ ಪಡೆದಿದ್ದಾನೆ ಎಂದು ಮಹಿಳೆ ದೂರಿದ್ದಾರೆ. ಇದೀಗ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ನೀಡಲು ನಿರಾಕರಿಸಿದಾಗ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಖಾಸಗಿ ಫೋಟೋಗಳನ್ನು ಸಂಬಂಧಿಕರಿಗೆ ತೋರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಪತಿ ಬಟ್ಟೆಯಲ್ಲಿದ್ದ ‘ಬಾರ್‌ ಕೋಡ್‌’ ಕೊಟ್ಟ ಸುಳಿವು!

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ನಿವೇಶನದಲ್ಲಿ ಎಸೆದಿದ್ದ ಆರೋಪದ ಮೇಲೆ ಸಂಪಿಗೆಹಳ್ಳಿ …

Leave a Reply

Your email address will not be published. Required fields are marked *