Breaking News

ಮಂಗಳೂರಲ್ಲಿ ರಾಗಿಂಗ್‌ ಹೆಸರಲ್ಲಿ ವಿಕೃತಿ: ಜೂನಿಯರ್ಸ್ ಕಿಡ್ನ್ಯಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ, 9 ವಿದ್ಯಾರ್ಥಿಗಳ ವಿರುದ್ಧ ಕೇಸ್

ಮಂಗಳೂರು: ಖಾಸಗಿ ಕಾಲೇಜಿನ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ರೂಮ್‌ನಲ್ಲಿ ಕೂಡಿ ಹಾಕಿ ಅಮಾನವೀಯವಾಗಿ ಹಲ್ಲೆ ಮಾಡಿದ ಆರೋಪದ ಮೇಲೆ 9 ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆಗಸ್ಟ್ 19ರಂದು ಕಾಲೇಜಿನಿಂದ ಹೊರಬರುತ್ತಿದ್ದ ಬಿಬಿಎ ವಿದ್ಯಾರ್ಥಿಗಳಾದ ಅಮೀರ್ ಅಲಿ ಹಾಗೂ ಮಹಮ್ಮದ್ ಅಲ್ಫಾಜ್ ಅವರನ್ನು ಬೈಕ್‌ನಲ್ಲಿ ಬಲವಂತವಾಗಿ ಕರೆದೊಯ್ದು ಕೋಣೆಯಲ್ಲಿ ಕೂಡಿ ಹಾಕಲಾಗಿತ್ತು. ಬಳಿಕ ಇಬ್ಬರನ್ನು ಬೆತ್ತಲೆಗೊಳಿಸಿ ಬೆಲ್ಟ್, ಹ್ಯಾಂಗರ್ ಹಾಗೂ ಕೈಗಳಿಂದ ಥಳಿಸಿ, ಕಬ್ಬಿಣದ ನಕಲ್ ಡಸ್ಟರ್‌ನಿಂದಲೂ ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹಲ್ಲೆಯ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಲಾಗಿದ್ದು, ನೀರು ಕೇಳಿದಾಗ ಗಲೀಜು ನೀರನ್ನು ಮೈಮೇಲೆ ಸುರಿದು, ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಕುಟುಂಬದವರೊಂದಿಗೆ ಠಾಣೆಗೆ ತೆರಳಿದ ವಿದ್ಯಾರ್ಥಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು BNS ಹಾಗೂ ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಪತಿ ಬಟ್ಟೆಯಲ್ಲಿದ್ದ ‘ಬಾರ್‌ ಕೋಡ್‌’ ಕೊಟ್ಟ ಸುಳಿವು!

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ನಿವೇಶನದಲ್ಲಿ ಎಸೆದಿದ್ದ ಆರೋಪದ ಮೇಲೆ ಸಂಪಿಗೆಹಳ್ಳಿ …

Leave a Reply

Your email address will not be published. Required fields are marked *