ಚಿಕ್ಕಬಳ್ಳಾಪುರ: ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಆರೋಪದ ಮೇಲೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಬಾಪೂಜಿನಗರದ ಶಬ್ಬೀರ್ ಎಂಬ ಯುವಕನನ್ನು ಬಂಧಿಸಿದ್ದಾರೆ. ಟೆಲಿಗ್ರಾಂ ಗ್ರೂಪ್‌ನಲ್ಲಿ ದಾಳಿ ನಡೆಸುವುದು ಹಾಗೂ ಹಣ ಸಂಗ್ರಹಿಸುವ ಕುರಿತು ಚರ್ಚೆ ನಡೆಸಿದ್ದ ಎನ್ನಲಾಗಿದೆ. ಶ್ರೀಮಂತರನ್ನು ಅಪಹರಿಸಿ ಹಣ ಸಂಗ್ರಹಿಸಿ, ಅದನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸುವ ಬಗ್ಗೆ ಚರ್ಚೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಬಗ್ಗೆಯೂ ಚರ್ಚೆ ನಡೆದಿತ್ತು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ BNS ಸೆಕ್ಷನ್ 113ರ ಅಡಿ ಪ್ರಕರಣ ದಾಖಲಾಗಿದ್ದು, ಟೆಲಿಗ್ರಾಂ ಗ್ರೂಪ್‌ನ ಇತರ ಸದಸ್ಯರು ಹಾಗೂ ಸಂಚಿನಲ್ಲಿ ಭಾಗಿಯಾಗಿರುವವರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
