ಮಂಗಳೂರು: ಪಡೀಲ್‌ನ ಕಾರು ಶೋರೂಂನಲ್ಲಿ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯಿಂದ ಶೋರೂಂನಲ್ಲಿದ್ದ ಕಾರುಗಳಿಗೂ ಹಾನಿಯಾಗಿದೆ. ಮಾಹಿತಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸಲಾಗಿದ್ದು, ಘಟನೆಯಿಂದ ಉಂಟಾದ ನಷ್ಟದ ಪ್ರಮಾಣ ಇನ್ನಷ್ಟೇ ಅಂದಾಜಿಸಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
