ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಹೆಸ್ಕಾಂ ಅಧಿಕಾರಿಗಳನ್ನು ಮನೆಗೆ ಕರೆಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಪಿಎಂಸಿ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಎಇಇ ಡಿ.ದೀಪಕ್ ಹಾಗೂ ಸೆಕ್ಷನ್ ಅಧಿಕಾರಿ ರಾಜು ಚವ್ಹಾಣ ಅವರು ಹಲ್ಲೆ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಿಸುವ ಭರವಸೆ ನೀಡಿದ ಬಳಿಕ ಸಿಬ್ಬಂದಿ ಪ್ರತಿಭಟನೆ ಕೈಬಿಟ್ಟರು. ಆರೋಪ ನಿರಾಕರಿಸಿರುವ ಚನ್ನರಾಜ, ಹಲ್ಲೆ ಮಾಡಿಲ್ಲ, ವಿದ್ಯುತ್ ಬಿಲ್ ಬಾಕಿ ಇರುವ ಕುರಿತು ಬುದ್ಧಿವಾದ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
