ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ಆಗ್ರಹಿಸಿ ಭೈರಮಂಗಲ ಕ್ರಾಸ್‌ನಲ್ಲಿ ನಡೆಯುತ್ತಿದ್ದ ರೈತರ ಉಪವಾಸ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ. ಬಿಡದಿ-ಹಾರೋಹಳ್ಳಿ ರಸ್ತೆ ತಡೆದು ಪ್ರತಿಭಟಿಸುತ್ತಿದ್ದ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಐದು ದಿನಗಳಿಂದ ಉಪವಾಸದಲ್ಲಿದ್ದ ವರಲಕ್ಷ್ಮಮ್ಮ ಎಂಬ ಮಹಿಳೆ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಕ್ರಮಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಸೆ.29ರಂದು ಯೋಜನೆ ಕುರಿತು ವಿಚಾರಣೆ ನಡೆಯಲಿದ್ದು, ಸರ್ಕಾರ ರೈತರ ಸಮಸ್ಯೆ ಆಲಿಸಬೇಕು ಎಂದು ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news
