ಹುಬ್ಬಳ್ಳಿಯಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಚಾಲಕ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಗ್ರಾಮೀಣ ಘಟಕ-1ರ ಡಿಪೋ ಆವರಣದಲ್ಲಿರುವ ಮರಕ್ಕೆ ತಡರಾತ್ರಿ ನೇಣು ಬಿಗಿದುಕೊಂಡಿದ್ದು, ಬೆಳಗಿನ ಜಾವ ಘಟನೆ ಬೆಳಕಿಗೆ ಬಂದಿದೆ. ಮುಂಡರಗಿ ಮೂಲದ ಮಂಜುನಾಥ್ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
