Breaking News

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ ಶಿಕ್ಷಕ!

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಪಿಎಂಶ್ರೀ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕ ಬೆಲ್ಟ್‌ನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳ ನಡುವಿನ ಸಣ್ಣ ಗಲಾಟೆಯ ವಿಚಾರವಾಗಿ ಬಾಲಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಶಿಕ್ಷಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ವಿದ್ಯಾರ್ಥಿಯ ಮೈಮೇಲೆ ಗಾಯಗಳಾಗಿದ್ದು, ಪೋಷಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲೇ ಶಿಕ್ಷಕ ಅಮಾನುಷವಾಗಿ ವರ್ತಿಸಿರುವುದಕ್ಕೆ ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಬಿಡದಿ ಹೋರಾಟಗಾರರ ಬಂಧನ , ಅಸ್ವಸ್ಥಗೊಂಡ ರೈತ ಮಹಿಳೆ – ಪೊಲೀಸರ ಮೇಲೆ ದೌರ್ಜನ್ಯದ ಆರೋಪ!

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ಆಗ್ರಹಿಸಿ ಭೈರಮಂಗಲ ಕ್ರಾಸ್‌ನಲ್ಲಿ ನಡೆಯುತ್ತಿದ್ದ ರೈತರ ಉಪವಾಸ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ. …

Leave a Reply

Your email address will not be published. Required fields are marked *