ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ಬಳಿ ಹೇಮಾವತಿ ನಾಲೆಯಲ್ಲಿ ಎಂಟು ದಿನಗಳಿಂದ ನಾಪತ್ತೆಯಾಗಿದ್ದ ನವವಿವಾಹಿತೆ ಪ್ರಿಯಾಂಕಾ ಅವರ ಮೃತದೇಹ ಪತ್ತೆಯಾಗಿದೆ. ನಾಲೆಯ ನೀರು ಸ್ಥಗಿತಗೊಳಿಸಿದ ಬಳಿಕ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೆ.19ರಂದು ಚಿಕ್ಕನಾಯಕನಹಳ್ಳಿ ಗ್ರಾಮದ ಬಳಿ ಪತಿ ರಾಜಶೇಖರ್ ಕಣ್ಣೆದುರೇ ಪ್ರಿಯಾಂಕಾ ನಾಲೆಗೆ ಹಾರಿದ್ದರು ಎನ್ನಲಾಗಿತ್ತು. ಅಂದಿನಿಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಎಂಟು ದಿನಗಳ ಕಾಲ ಶೋಧ ಕಾರ್ಯ ನಡೆಸಿದ್ದರು. ಪ್ರಿಯಾಂಕಾ ಕುಟುಂಬದವರು ಪತಿ ರಾಜಶೇಖರ್ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾಜಶೇಖರ್ ಕುಟುಂಬ ಈ ಆರೋಪವನ್ನು ತಳ್ಳಿಹಾಕಿದೆ. ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
