ಕುರುಗೋಡು ಪಟ್ಟಣದ ಸರ್ವೇ ನಂ.675ರ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಪತ್ರಕರ್ತ ಕೆ.ವೀರಭದ್ರಗೌಡ ಸೇರಿದಂತೆ 23 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಶುಕ್ರವಾರ ರಾತ್ರಿ 10.45ಕ್ಕೆ ಇನ್‌ಸ್ಪೆಕ್ಟರ್ ಕರೆಮ್ಮ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು, ₹1.26 ಲಕ್ಷ ನಗದು ಹಾಗೂ ಇಸ್ಪೀಟ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

