ಚಿಕ್ಕಮಗಳೂರು: ಕಡೂರು ತಾಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ಎರಡು ತೆಂಗಿನ ಸಸಿಗಳನ್ನು ಕಡಿದ ವಿಚಾರಕ್ಕೆ ಮಾವ ರಾಜಾನಾಯ್ಕ, ಅಳಿಯ ದೇವರಾಜ್ ನಾಯ್ಕ (35) ಅವರನ್ನು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕುಟುಂಬ ಕಲಹದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹೊಲಕ್ಕೆ ನುಗ್ಗಿದ ದೇವರಾಜ್ ಎರಡು ತೆಂಗಿನ ಸಸಿಗಳನ್ನು ಕಡಿದಿದ್ದು, ಇದರಿಂದ ಕೋಪಗೊಂಡ ರಾಜಾನಾಯ್ಕ ಆತನ ಕೈಯಲ್ಲಿದ್ದ ಮಚ್ಚನ್ನು ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಂಚನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
