Breaking News

ಕೊಪ್ಪಳದ ಲಾಡ್ಜ್‌ನಲ್ಲಿ ಯುವಕನ ಶವಪತ್ತೆ

ಕೊಪ್ಪಳ: ಪಶುಸಂಗೋಪನಾ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯಮನೂರಪ್ಪ ಮುರಡಿ (27) ನಗರದ ಕನಕದಾಸ ವೃತ್ತದ ಬಳಿಯ ಪ್ರಿಯಾಂಕಾ ಪ್ಯಾರಡೈಸ್‌ ಹೋಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಷ್ಟಗಿ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಯಮನೂರಪ್ಪ ಸೆ.16ರಿಂದ ಕಾಣೆಯಾಗಿದ್ದರು. ಈ ಕುರಿತು ಕುಟುಂಬದವರು ತಾವರಗೇರಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ ಲಾಡ್ಜ್‌ನಿಂದ ಹೊರಡಬೇಕಿದ್ದರೂ ಕೊಠಡಿಯ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರ ಸಮ್ಮುಖದಲ್ಲಿ ಬಾಗಿಲು ತೆರೆದಾಗ ಯಮನೂರಪ್ಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಅವರ ತಂದೆ ಶರಣಪ್ಪ ಮುರಡಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *