Breaking News

ಹಾವೇರಿಯ ಜಿಲ್ಲಾಸ್ಪತ್ರೆ ಕ್ಯಾಂಟೀನ್ ನಲ್ಲಿ ಉಪ್ಪಿಟ್ಟು, ಕೇಸರಿಬಾತ್ ನಲ್ಲಿ ಹಲ್ಲಿ ಪತ್ತೆ : ಬೆಚ್ಚಿಬಿದ್ದ ರೋಗಿಗಳು!

ಹಾವೇರಿ: ಜಿಲ್ಲಾ ಆಸ್ಪತ್ರೆಯ ಕ್ಯಾಂಟೀನ್‌ನಲ್ಲಿ ರೋಗಿಗಳಿಗೆ ನೀಡಲಾಗಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆಯಾಗಿದೆ. ಕೇಸರಿಬಾತ್ ಹಾಗೂ ಉಪ್ಪಿಟ್ಟಿನಲ್ಲಿ ಹಲ್ಲಿ ಇರುವುದನ್ನು ಕಂಡು ರೋಗಿಗಳು ಆಘಾತಕ್ಕೊಳಗಾಗಿದ್ದಾರೆ. ರೋಗಿಗಳಿಗೆ ಪಾರ್ಸೆಲ್ ಮಾಡಲಾಗಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಘವೇಂದ್ರ ಕ್ಯಾಂಟೀನ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕ್ಯಾಂಟೀನ್ ಮಾಲೀಕರ ವಿರುದ್ಧ ರೋಗಿಗಳು ಅಸಮಾಧಾನ ಹೊರಹಾಕಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ರಾಘವೇಂದ್ರ ಕ್ಯಾಂಟೀನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಸತ್ತ ಜಾನುವಾರುಗಳ ಪರಿಹಾರದ ಹಣ ನುಂಗಿದ ಪಾಪಿಗಳು : ರಾಬಕೋವಿ ಹಾಲು ಒಕ್ಕೂಟದ ಮತ್ತಷ್ಟು ಅಕ್ರಮ ಬಯಲು!

ಬಳ್ಳಾರಿ: ರಾಬಕೋವಿ ಹಾಲು ಒಕ್ಕೂಟದಲ್ಲಿ ಮೃತಪಟ್ಟ ಜಾನುವಾರುಗಳ ವಿಮಾ ಪರಿಹಾರದ ಹಣ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿರುವ ಗಂಭೀರ …

Leave a Reply

Your email address will not be published. Required fields are marked *