ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತ ದೊರೆ (27) ಎಂಬಾತ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಡಿಯೋದಲ್ಲಿ ಪತ್ನಿಗೆ ಬೇರೆ ಯುವಕನೊಂದಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿರುವ ದೊರೆ, ಈ ವಿಚಾರ ತಿಳಿದಿದ್ದರೂ ಪತ್ನಿಯ ಪೋಷಕರು ಆಕೆಯ ಪರವಾಗಿ ನಿಂತಿದ್ದಾರೆ ಎಂದು ಹೇಳಿದ್ದಾರೆ. ತನ್ನ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿರುವ ಆತ, ಪತ್ನಿಯ ಮೊಬೈಲ್ ಕಾಲ್ ರೆಕಾರ್ಡಿಂಗ್ ಪರಿಶೀಲಿಸುವಂತೆಯೂ ಕೇಳಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

