Breaking News

ಸತ್ಯಾತ್ಮತೀರ್ಥ ಶ್ರೀಪಾದಂಗಳ ಕಾರು ಅಪಘಾತ: ಸ್ವಾಮೀಜಿ ಸೇರಿ ಮೂವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಬೆಂಗಳೂರಿನ ಬಸವನಗುಡಿಯ ಉತ್ತರಾಧಿಮಠದ ಸತ್ಯಾತ್ಮತೀರ್ಥ ಸ್ವಾಮೀಜಿಗಳ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಸ್ವಾಮೀಜಿ ಸೇರಿ ಮೂವರು ಗಾಯಗೊಂಡಿದ್ದಾರೆ. ಧಾರವಾಡದಿಂದ ಸವಣೂರಿಗೆ ತೆರಳುತ್ತಿದ್ದ ವೇಳೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಾಟರ್ ಪಾರ್ಕ್ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯಾತ್ಮತೀರ್ಥ ಶ್ರೀಗಳಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಯಾವುದೇ ಗಂಭೀರ ಅಪಾಯವಿಲ್ಲ ಎಂದು ತಿಳಿದುಬಂದಿದೆ. ಈ ಕುರಿತು ಧಾರವಾಡ ಉತ್ತರಾಧಿಮಠದ ಸಿಇಒ ವಿದ್ಯಾಧೀಶಾಚಾರ್ಯ ಗುತ್ತಲ ಸ್ಪಷ್ಟನೆ ನೀಡಿದ್ದು, ಶ್ರೀಗಳ ಆರೋಗ್ಯದ ಬಗ್ಗೆ ಭಕ್ತರು ಆತಂಕಪಡುವ ಅಗತ್ಯವಿಲ್ಲ. ಅಪಘಾತದ ಕುರಿತು ಹರಡುತ್ತಿರುವ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *