Breaking News

ಸುಹಾಸ್ ಶೆಟ್ಟಿ ಹತ್ಯೆಗೆ ಸೇಡು ತಿರಿಸಿಕೊಳ್ಳಲು ₹24 ಲಕ್ಷ ಸುಪಾರಿ: ಕೊಲೆಗೆ ಸ್ಕೆಚ್ ಹಾಕಿದ್ದ ಜಾಲದ ವಿರುದ್ಧ ಬಜಪೆ ಠಾಣೆಯಲ್ಲಿ FIR, ಸಿಸಿಬಿಗೆ ತನಿಖೆ!

ಮಂಗಳೂರಿನಲ್ಲಿ 2025ರ ಮೇ ತಿಂಗಳಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮತ್ತೊಬ್ಬ ವ್ಯಕ್ತಿಯನ್ನು ಕೊಲೆ ಮಾಡಲು ₹24 ಲಕ್ಷ ಸುಪಾರಿ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿಯ ಸುದೀಪ್ ಹಾಗೂ ಆತನ ಸಹಚರರು ಕಿನ್ನಿಪದವಿನ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳ ಸೂಚನೆಯಂತೆ ದೂರುದಾರ ಅಭಿಷೇಕ್ ಹಾಗೂ ಆತನ ಸ್ನೇಹಿತರು ವ್ಯಕ್ತಿಯ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಕೃತ್ಯಕ್ಕಾಗಿ ತಲವಾರುಗಳನ್ನು ಸಿದ್ಧಪಡಿಸಲಾಗಿತ್ತು ಎನ್ನಲಾಗಿದ್ದು, ಕೊಲೆ ಮಾಡಿದರೆ ₹24 ಲಕ್ಷದ ಜೊತೆಗೆ ಜೈಲಿಗೆ ಹೋದ ಸಂದರ್ಭದಲ್ಲಿ ಕುಟುಂಬದ ನಿರ್ವಹಣೆಗೆ ಹಣ ಮತ್ತು ದಿನಸಿ ನೀಡುವುದಾಗಿ ಆಮಿಷವೊಡ್ಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಪತ್ನಿಗೆ ಮಗುವಾದ ಬಳಿಕ ಮನಪರಿವರ್ತನೆಗೊಂಡ ಅಭಿಷೇಕ್ ಕೊಲೆ ಸಂಚಿನಿಂದ ಹಿಂದೆ ಸರಿದು, WhatsApp ಚಾಟ್, UPI ವ್ಯವಹಾರಗಳ ದಾಖಲೆ ಮತ್ತು ಸ್ಕ್ರೀನ್‌ಶಾಟ್‌ಗಳೊಂದಿಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಮಂಗಳೂರು ನಗರ CCBಗೆ ವಹಿಸಲಾಗಿದ್ದು, ಸದ್ಯ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸ್ ಆಯುಕ್ತ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *