ಸಚಿವ ಮಲ್ಲಿಕಾರ್ಜುನ ಅವರ ಜನ್ಮದಿನದಂದು ಶುಭಾಶಯ ಕೋರಲು ತೆರಳಿದ್ದ ರೌಡಿ ಶೀಟರ್ ಖಾಲಿದ್ ಪೈಲ್ವಾನ್ ಮೇಲೆ ಕಾಂಗ್ರೆಸ್ ಮುಖಂಡರಾದ ಸಾಧಿಕ್ ಪೈಲ್ವಾನ್ ಹಾಗೂ ಅಯೂಬ್ ಪೈಲ್ವಾನ್ ಅವರ ಪುತ್ರರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಗರದ ಕಲ್ಲೇಶ್ವರ ಮಿಲ್ನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಖಾಲಿದ್ ಪೈಲ್ವಾನ್ ವಿಡಿಯೋ ಮೂಲಕ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ತಮ್ಮ ರಾಜಕೀಯ ಬೆಳವಣಿಗೆಯನ್ನು ಸಹಿಸದೆ ಹಲ್ಲೆ ನಡೆಸಲಾಗಿದೆ ಎಂದು ಖಾಲಿದ್ ಆರೋಪಿಸಿದ್ದಾರೆ. ಘಟನೆಯ ಬಳಿಕ ಖಾಲಿದ್ ಹಾಗೂ ವಿರೋಧಿ ಬಣದವರು ವೈದ್ಯಕೀಯ ಪರೀಕ್ಷೆ (MLC) ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಘಟನೆಗೆ ಸಂಬಂಧಿಸಿದಂತೆ RMC ಪೊಲೀಸ್ ಠಾಣೆಯಲ್ಲಿ ಈವರೆಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಹಲ್ಲೆಗೆ ನಿಖರ ಕಾರಣ ಮತ್ತು ಘಟನೆಯಲ್ಲಿ ಯಾರು ಭಾಗಿಯಾಗಿದ್ದರು ಎಂಬುದು ಪೊಲೀಸ್ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

