Breaking News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಎಂಡಿಎಂಎ ಸಹಿತ ಮೂವರು ಆರೋಪಿಗಳ ಸೆರೆ

ಮಂಗಳೂರಿನಲ್ಲಿ ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಟೆಂಪೋ ಸೇರಿದಂತೆ ಒಟ್ಟು ₹29.80 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ನವಾಝ್ ಅಲಿಯಾಸ್ ನವ್ವಾ, ಮುಹಮ್ಮದ್ ಆರೀಫ್ ಎನ್. ಮತ್ತು ಲಾಯ್ಡ್ ಡಿಸೋಜ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಆಧರಿಸಿ ಮುಡಿಪು ಕಾಯರ್‌ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಆರೋಪಿ ನವಾಝ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ಜಾನುವಾರು ಕಳವು ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ 16 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಜಾಲದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *