ಸುಳ್ಯದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೃಷ್ಣಕುಮಾರ್ ಎಂಬಾತನ ವಿರುದ್ಧ ಬಾಲಕಿಯ ಮನೆಯವರು ದೂರು ನೀಡಿದ್ದಾರೆ. ಮನೆಯಲ್ಲಿ ಇಬ್ಬರು ಬಾಲಕಿಯರು ಮಾತ್ರ ಇದ್ದ ಸಂದರ್ಭದಲ್ಲಿ ಮನೆಗೆ ಬಂದ ಆರೋಪಿ, ಬಾಲಕಿಯ ಬಳಿ ನೀರು ಕೇಳಿ ಬಳಿಕ ಆಕೆಯ ಕೈ ಹಿಡಿದು ಎಳೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಾಲಕಿಯರು ಬೊಬ್ಬೆ ಹಾಕಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಬಾಲಕಿಯ ಮನೆಯವರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ತನಿಖೆಯ ಬಳಿಕ ಆರೋಪಿಯನ್ನು ಬಂಧಿಸಿ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಕೃಷ್ಣಕುಮಾರ್ಗೆ ನ್ಯಾಯಾಂಗ ಬಂಧನ ವಿಧಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

