Breaking News

ಲೈಂಗಿಕ ಕಿರುಕುಳ ಆರೋಪ; ಶಾಲಾ ಗೆಳೆಯನ ಜೊತೆ ಸೇರಿ ವ್ಯಕ್ತಿಯ ಹತ್ಯೆ, ಇಬ್ಬರು ಅರೆಸ್ಟ್

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಸೆಪ್ಟೆಂಬರ್ 21ರಂದು ನಡೆದ ರಣವೀರ ರಜಪೂತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶ್ರೀದೇವಿ ರಜಪೂತ ಹಾಗೂ ಬೈರು ಪವಾರ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರಣವೀರ ಶ್ರೀದೇವಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಆಕ್ರೋಶಗೊಂಡ ಶ್ರೀದೇವಿ ಮತ್ತು ಆಕೆಯ ಶಾಲಾ ಗೆಳೆಯ ಬೈರು ಪವಾರ್ ಸೇರಿಕೊಂಡು ಕೊಲೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಘಟನೆ ನಡೆದ ರಾತ್ರಿ ಬೈಕ್ ಸ್ಟಾರ್ಟ್ ಆಗುತ್ತಿಲ್ಲ ಎಂಬ ನೆಪದಲ್ಲಿ ಬೈರು, ರಣವೀರನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ರಣವೀರನ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು, ಹತ್ಯೆಯ ನಂತರ ಬೈರು ಶ್ರೀದೇವಿಗೆ ಕರೆ ಮಾಡಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಇಬ್ಬರನ್ನು ಬಂಧಿಸಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಸೊಸೆ ಕಿರುಕುಳಕ್ಕೆ ಬೇಸತ್ತು ಮಾವ ಆತ್ಮಹತ್ಯೆ

ಶಿರಾಳಕೊಪ್ಪ: ಸೊಸೆ ಕಿರುಕುಳಕ್ಕೆ ಬೇಸತ್ತು 55 ವರ್ಷದ ಶಿವಮೂರ್ತಿ ಎಂಬುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ನೇರಲಗಿ …

Leave a Reply

Your email address will not be published. Required fields are marked *