ನಕಲಿ ಔಷಧ ದಂಧೆಗೆ ಬಿಗ್ ಶಾಕ್..! ಕಿಂಗ್‌ಪಿನ್ ಪ್ರಶಾಂತ್ ರಂಜನ್ ಬಾಬು ಏರ್‌ಪೋರ್ಟ್‌ನಲ್ಲೇ ಬಂಧನ..!
ರಾಮನಗರದ ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾದ ನಕಲಿ ಔಷಧ ಜಾಲ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಶಂಕಿಸಲಾಗಿರುವ ಪ್ರಶಾಂತ್ ರಂಜನ್ ಬಾಬು ಅವರನ್ನು ಅಜರ್‌ಬೈಜಾನ್‌ನಿಂದ ವಾಪಸಾದ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಲುಕ್‌ಔಟ್ ನೋಟಿಸ್ ಆಧರಿಸಿ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು, ಎಸಿಪಿ ಅಂಜನ್ ಕುಮಾರ್ ನೇತೃತ್ವದ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿದೆ. ನಕಲಿ ಔಷಧಗಳ ಉತ್ಪಾದನೆ ಮತ್ತು ಪೂರೈಕೆ ಜಾಲದಲ್ಲಿ ಪ್ರಶಾಂತ್ ಪ್ರಮುಖ ಪಾತ್ರ ವಹಿಸಿರುವ ಶಂಕೆಯಿದೆ. ಈ ಜಾಲದ ಮತ್ತೊಬ್ಬ ಪ್ರಮುಖ ಆರೋಪಿ ವೀರೇಶ್ ಜೈನ್ ಬೆಂಗಳೂರಿನ ಆಸ್ಪತ್ರೆಗಳು ಮತ್ತು ಮೆಡಿಕಲ್‌ಗಳಿಗೆ ನಕಲಿ ಔಷಧ ಪೂರೈಸುತ್ತಿದ್ದ ಎನ್ನಲಾಗಿದೆ. ಜಾಲದ ವಾರ್ಷಿಕ ವಹಿವಾಟು ಸುಮಾರು ₹15 ಕೋಟಿ ಎಂದು ತನಿಖೆಯಲ್ಲಿ ತಿಳಿದುಬಂದಿದ್ದು, ಇದೀಗ ಪ್ರಶಾಂತ್ ಬಂಧನದ ಬಳಿಕ ತನಿಖೆ ಮತ್ತಷ್ಟು ಚುರುಕುಗೊಳ್ಳಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

