Breaking News

ಹಾಲು ಉಕ್ಕಿಸುವ ಕಾರ್ಯಕ್ರಮ: ಸ್ನೇಹಿತೆ ಆಹ್ವಾನಿಸಿ ಚಿನ್ನ ದೋಚಿದ್ದ ಮೂವರ ಸೆರೆ

ಬೆಂಗಳೂರು: ಬಾಡಿಗೆ ಮನೆಯಲ್ಲಿ ಹಾಲು ಉಕ್ಕಿಸುವ ನೆಪದಲ್ಲಿ ಸ್ನೇಹಿತೆಯನ್ನು ಕರೆಸಿಕೊಂಡು ಹಲ್ಲೆ ಮಾಡಿ ನಗದು ಹಾಗೂ ಚಿನ್ನಾಭರಣ ದೋಚಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕುಣಿಗಲ್ ತಾಲ್ಲೂಕಿನ ಬೋರೇಗೌಡ (32), ಚಂದ್ರಶೇಖರ ಅಲಿಯಾಸ್ ಅಭಿ (28) ಹಾಗೂ ಸತೀಶ್ (26) ಬಂಧಿತರು. ಬೋರೇಗೌಡನ ಪರಿಚಯವಿದ್ದ 34 ವರ್ಷದ ಮಹಿಳೆಯನ್ನು ನಾಗಸಂದ್ರದ ಬಾಡಿಗೆ ಮನೆಗೆ ಹಾಲು ಉಕ್ಕಿಸುವ ಕಾರ್ಯಕ್ರಮದ ನೆಪದಲ್ಲಿ ಕರೆಸಿಕೊಂಡಿದ್ದ. ಮಹಿಳೆ ಒಂದು ಲಕ್ಷ ರೂ. ನಗದು ಹಾಗೂ ಚಿನ್ನಾಭರಣ ಧರಿಸಿಕೊಂಡು ಮನೆಗೆ ಬಂದಿದ್ದರು. ಬಳಿಕ ಆರೋಪಿಗಳು ಆಕೆಯ ಮೇಲೆ ಹಲ್ಲೆ ಮಾಡಿ, ಕೈಕಾಲು ಕಟ್ಟಿ ನಗದು ಹಾಗೂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಘಟನೆ ಕುರಿತು ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೀಣ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನೂ ಬಂಧಿಸಿ, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share News

About BigTv News

Check Also

ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು

ಮೈಸೂರು: ಕೇರಳದಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಪಡೆದಿದ್ದ 31 ವರ್ಷದ ಧನೇಶ್ ಎಸ್. ನಾಯರ್ ಅಲಿಯಾಸ್ ಡ್ಯಾನಿ, ಮೈಸೂರಿನ …

Leave a Reply

Your email address will not be published. Required fields are marked *