ಬೆಂಗಳೂರು: ಲಗ್ಗೆರೆಯ ಬಾಡಿಗೆ ಮನೆಯಲ್ಲಿ ನವೀನ್ ಎಂಬ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತದೇಹದಲ್ಲಿ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ನಂದಿನಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ನವೀನ್ ಹಾಗೂ ಕವಿತಾ ವಿವಾಹವಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ನವೀನ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ದಂಪತಿ ನಡುವೆ ಸಣ್ಣಪುಟ್ಟ ವಿಚಾರಗಳಿಗೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಸೆಪ್ಟೆಂಬರ್ 26ರಂದು ದಂಪತಿ ನಡುವೆ ಗಲಾಟೆ ನಡೆದಿದ್ದು, ಇಬ್ಬರ ನಡುವೆ ಹಲ್ಲೆ ಕೂಡ ನಡೆದಿದೆ ಎನ್ನಲಾಗಿದೆ. ಬಳಿಕ ಕವಿತಾ ಮನೆಯಿಂದ ಹೊರಗೆ ಹೋಗಿದ್ದು, ಮರಳಿ ಬಂದಾಗ ನವೀನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

