Breaking News

ಹನೂರು : ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೆಳೆದಿದ್ದ 292 ಗಾಂಜಾ ಗಿಡಗಳು ವಶ

ಚಾಮರಾಜನಗರ: ತಾಲೂಕಿನ ಕೂಳಿಹಟ್ಟಿ, ಬೆಳ್ಳಾಜಿ ಬೀಟ್‌ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೆಳೆದಿದ್ದ 292 ಗಾಂಜಾ ಗಿಡಗಳನ್ನು ಅಬಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಗಾಂಜಾ ಗಿಡಗಳ ಒಟ್ಟು ತೂಕ 213 ಕೆ.ಜಿ. 600 ಗ್ರಾಂ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆದಿರುವುದು ಪತ್ತೆಯಾಗಿದೆ. ಈ ಸಂಬಂಧ ನೆಲ್ಲಿಕತ್ರಿ ಗ್ರಾಮದ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅಬಕಾರಿ ಉಪನಿರೀಕ್ಷಕಿ ನಂದಿನಿ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಇದ್ದರೆ ಇಲಾಖೆಗೆ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಅಬಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

Share News

About BigTv News

Check Also

ಬಾಲಕನ ಹತ್ಯೆ ಪ್ರಕರಣ: ಅಪ್ರಾಪ್ತರಿಬ್ಬರ ಬಂಧನ

ಬೆಂಗಳೂರು: ವಿಭೂತಿಪುರ ಕೆರೆಯ ಬಳಿ 13 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಎಚ್‌ಎಎಲ್ ಠಾಣೆ …

Leave a Reply

Your email address will not be published. Required fields are marked *