Breaking News

‘KPSC’ ನೇಮಕಾತಿ ಅಕ್ರಮ: ಆರೋಪಿ ಬಸವರಾಜ್ ಕನ್ನಾಳೆ ಡೈರಿಯಲ್ಲಿ ಬಯಲಾಯ್ತು ಲಕ್ಷ ಲಕ್ಷ ಹಣದ ಲೆಕ್ಕ!

ಬೆಂಗಳೂರು: KPSC ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಮನೆಯಲ್ಲಿ ಸಿಐಡಿಗೆ ಮಹತ್ವದ ಡೈರಿ ಪತ್ತೆಯಾಗಿದೆ. ಡೈರಿಯಲ್ಲಿ ಅಕ್ರಮವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳ ಹೆಸರು, ಪಡೆದ ಹಣ ಹಾಗೂ ಬಾಕಿ ಹಣದ ವಿವರಗಳಿವೆ. 20ಕ್ಕೂ ಅಧಿಕ ಅಭ್ಯರ್ಥಿಗಳಿಗೆ ರಹಸ್ಯ ತರಬೇತಿ ನೀಡಲು ಕನ್ನಾಳೆ ಮೂರು ಐಷಾರಾಮಿ ವಿಲ್ಲಾಗಳನ್ನು ಬುಕ್ ಮಾಡಿದ್ದ ಎನ್ನಲಾಗಿದೆ. ಅಭ್ಯರ್ಥಿಗಳಿಂದ ಮುಂಗಡವಾಗಿ ಲಕ್ಷಾಂತರ ರೂಪಾಯಿ ಪಡೆದು, ಉಳಿದ ಹಣದ ವಿವರಗಳನ್ನು ಡೈರಿಯಲ್ಲಿ ದಾಖಲಿಸಿದ್ದಾನೆ ಎನ್ನಲಾಗಿದೆ. ಡೈರಿಯನ್ನು ವಶಕ್ಕೆ ಪಡೆದಿರುವ ಸಿಐಡಿ, ಅದರಲ್ಲಿರುವ ಅಭ್ಯರ್ಥಿಗಳು ಹಾಗೂ ಅಕ್ರಮದಲ್ಲಿ ಭಾಗಿಯಾಗಿರುವ ಶಂಕಿತರನ್ನು ವಿಚಾರಣೆಗೆ ಒಳಪಡಿಸಲು ಸಿದ್ಧತೆ ನಡೆಸಿದೆ. ಈ ಡೈರಿಯಿಂದ KPSC ನೇಮಕಾತಿ ಅಕ್ರಮದ ಇನ್ನಷ್ಟು ವಿವರಗಳು ಹೊರಬರುವ ಸಾಧ್ಯತೆಯಿದೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *