ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಕುಪೇಂದ್ರ ಅವರ ಮನೆ ಮುಂದೆ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಲಗ್ನ ಪತ್ರಿಕೆ, ಮೂಳೆ ಹಾಗೂ ಕಪ್ಪು ಅನ್ನ ಬಳಸಿ ವಾಮಾಚಾರ ಮಾಡಿರುವುದು ಪತ್ತೆಯಾಗಿದೆ. ಕುಪೇಂದ್ರ ಅವರು ಒಂದು ತಿಂಗಳ ಹಿಂದೆ ತಮ್ಮ ಮಗನ ವಿವಾಹ ಮಾಡಿದ್ದರು. ನವದಂಪತಿಗೆ ಕೆಡುಕು ಉಂಟುಮಾಡುವ ಉದ್ದೇಶದಿಂದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯಿಂದ ಕುಪೇಂದ್ರ ಕುಟುಂಬ ಆತಂಕಕ್ಕೊಳಗಾಗಿದ್ದು, ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

