ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಕಗ್ಗಲೀಪುರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಕಾರನ್ನು ಸಾರ್ವಜನಿಕರು ಅಡ್ಡಗಟ್ಟಿ ನೆರವು ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ, ರೈತರ ಪ್ರತಿಭಟನೆಗೆ ತೆರಳಬೇಕಿರುವುದರಿಂದ ತುರ್ತಾಗಿ ಹೋಗಬೇಕಿದೆ ಎಂದು ಹೇಳಿ ನಿಖಿಲ್ ಕುಮಾರಸ್ವಾಮಿ ಸ್ಥಳದಿಂದ ತೆರಳಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನಿಖಿಲ್ ಅವರ ವರ್ತನೆಗೆ ಆಕ್ಷೇಪ ವ್ಯಕ್ತವಾಗಿದೆ. ಯುವ ಕಾಂಗ್ರೆಸ್‌ನ ನಾಗಮಂಗಲ ಘಟಕವೂ ವಿಡಿಯೋ ಹಂಚಿಕೊಂಡು, ಅಪಘಾತದ ಸಂದರ್ಭದಲ್ಲಿ ಮಾನವೀಯ ನೆರವು ನೀಡದಿರುವ ಬಗ್ಗೆ ಪ್ರಶ್ನೆ ಎತ್ತಿದೆ. ಇದೇ ವೇಳೆ, ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

