Breaking News

ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ಗಲಾಟೆ; ಮೂವರಿಗೆ ಚಾಕು ಇರಿತ

ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಮುಂದುವರಿದು ಮೂವರಿಗೆ ಚಾಕುವಿನಿಂದ ಇರಿದ ಘಟನೆ ಗಂಗಾವತಿ ತಾಲೂಕಿನ ಆರಾಳ ಗ್ರಾಮದಲ್ಲಿ ನಡೆದಿದೆ. ಜಯಪ್ರಕಾಶ್, ಗುರುಪ್ರಕಾಶ್ ಹಾಗೂ ದೊಡ್ಡಬಸವ ಗಾಯಗೊಂಡಿದ್ದು, ಜಯಪ್ರಕಾಶ್ ಮತ್ತು ಗುರುಪ್ರಕಾಶ್ ಅವರ ಹೊಟ್ಟೆಗೆ ಗಂಭೀರ ಗಾಯಗಳಾಗಿವೆ. ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರವಿವಾರ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೆಲ ಯುವಕರು ಡಿಜೆ ವಾಹನದ ಮೇಲೆ ಹತ್ತಿ ಕುಣಿಯುತ್ತಿದ್ದರು. ಭದ್ರತೆ ದೃಷ್ಟಿಯಿಂದ ಜಯಪ್ರಕಾಶ್ ಹಾಗೂ ಅವರ ಕಡೆಯವರು ಯುವಕರನ್ನು ಕೆಳಗಿಳಿಸಿದ್ದರಿಂದ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಸೋಮವಾರ ಮತ್ತೆ ಜಗಳವಾಗಿದ್ದು, ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮೂವರ ಮೇಲೆ ದಾಳಿ ನಡೆಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ ಆರೋಪ

ಬಾಗಲಕೋಟೆ: ಯುವತಿಯರನ್ನು ಚುಡಾಯಿಸುತ್ತಿದ್ದುದನ್ನು ಪ್ರಶ್ನಿಸಿದ ಕಾರಣಕ್ಕೆ ಯುವಕನೊಬ್ಬನ ಮೇಲೆ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೆರೂರು ಪಟ್ಟಣದಲ್ಲಿ …

Leave a Reply

Your email address will not be published. Required fields are marked *