Breaking News

ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ ಆರೋಪ

ಬಾಗಲಕೋಟೆ: ಯುವತಿಯರನ್ನು ಚುಡಾಯಿಸುತ್ತಿದ್ದುದನ್ನು ಪ್ರಶ್ನಿಸಿದ ಕಾರಣಕ್ಕೆ ಯುವಕನೊಬ್ಬನ ಮೇಲೆ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೆರೂರು ಪಟ್ಟಣದಲ್ಲಿ ಕೇಳಿಬಂದಿದೆ. ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಪಾಂಡು ಬಡಿಗೇರ ಅವರನ್ನು ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪಾಂಡು ಅವರು ಯುವತಿಯರನ್ನು ಚುಡಾಯಿಸುತ್ತಿದ್ದ ವಿಚಾರವನ್ನು ಪ್ರಶ್ನಿಸಿದ್ದರಿಂದ ಕೆಲ ಯುವಕರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪಾಂಡು ಅವರ ಪಾಲಕರಾದ ಧರ್ಮಣ್ಣ ಪೂಜಾರ ಆರೋಪಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಪಾಂಡು ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮಾಹಿತಿ ಕಲೆಹಾಕಿ ತನಿಖೆ ನಡೆಸುತ್ತಿದ್ದಾರೆ. ಹಲ್ಲೆಗೆ ನಿಖರ ಕಾರಣವೇನು, ಎಷ್ಟು ಮಂದಿ ಭಾಗಿಯಾಗಿದ್ದಾರೆ ಹಾಗೂ ಕುಟುಂಬಸ್ಥರು ಮಾಡಿರುವ ಆರೋಪಗಳ ವಾಸ್ತವಾಂಶವೇನು ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ.

Share News

About BigTv News

Check Also

ಸಕಲೇಶಪುರದಲ್ಲಿ ಸಿನಿಮೀಯ ಕಾರ್ಯಾಚರಣೆ: ಸರಗಳ್ಳತನ ಪ್ರಕರಣದ ಆರೋಪಿಗಳ ಬಂಧನ

ಸಕಲೇಶಪುರ: ಪಟ್ಟಣದಲ್ಲಿ ಮಹಿಳೆಯರ ಸರ ದೋಚಿ ಆತಂಕ ಸೃಷ್ಟಿಸಿದ್ದ ಇಬ್ಬರು ಸರಗಳ್ಳರನ್ನು ಸಕಲೇಶಪುರ ಪೊಲೀಸರು ಮಂಗಳವಾರ ಮುಂಜಾನೆ ಬಂಧಿಸಿದ್ದಾರೆ. ಕೆಲ …

Leave a Reply

Your email address will not be published. Required fields are marked *