ಕೋಲಾರ: ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ಏಕಾಏಕಿ ಹೊತ್ತಿ ಉರಿದ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಬೆಂಕಿಯ ತೀವ್ರತೆಗೆ ಸ್ಕಾರ್ಪಿಯೋ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
