ಕಾಸರಗೋಡು: ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಂಗಡಿಯ ವಸತಿಗೃಹದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಯನ್ನು 10 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ವಯನಾಡು ಮೂಲದ ಬಿಜು ಸಿ.ಜೆ. ಅಲಿಯಾಸ್ ಆಂಟೋನಿ ಬಿಜು (44) ಬಂಧಿತ ಆರೋಪಿ. 2016ರಲ್ಲಿ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ನ್ಯಾಯಾಂಗ ಬಂಧನದ ಅವಧಿ ಮುಗಿದ ಬಳಿಕ ಬಿಡುಗಡೆಯಾಗಿದ್ದ ಆತ, ನಂತರ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಜಿಲ್ಲಾ ಪೊಲೀಸ್ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ವಿಶೇಷ ತಂಡದ ಸಹಾಯದಿಂದ ಮಂಜೇಶ್ವರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
