ಉಡುಪಿ: ಕೊಲ್ಲೂರು ಠಾಣೆ ವ್ಯಾಪ್ತಿಯಲ್ಲಿ ಪತ್ನಿಗೆ ಇಂಜೆಕ್ಷನ್ ಮೂಲಕ ವಿಷ ನೀಡಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಾಗಿದ್ದ ಪತಿ ಹಾಗೂ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಳಿಹೊಳೆ ಗ್ರಾಮದ ಸೌಪರ್ಣಿಕಾ ನದಿ ಸಮೀಪ ನಡೆದಿದೆ. ವಿಠ್ಠಲ ನಾಯ್ಕ (35) ಹಾಗೂ ಭವ್ಯಾ ನಾಯ್ಕ ಅಲಿಯಾಸ್ ನಿಶ್ಮಿತಾ (33) ಮೃತರು. ವಿಠ್ಠಲ ನಾಯ್ಕ ತನ್ನ ಪತ್ನಿ ಶ್ಯಾಮಲಾ ಅವರಿಗೆ ವಿಷದ ಇಂಜೆಕ್ಷನ್ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಠ್ಠಲ ಎ1 ಹಾಗೂ ಭವ್ಯಾ ಎ2 ಆರೋಪಿಗಳಾಗಿದ್ದರು. ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದ್ದು, ಪ್ರಕರಣದ ಬಳಿಕ ನಾಪತ್ತೆಯಾಗಿದ್ದರು. ಮಂಗಳವಾರ ಇಬ್ಬರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಸೌಪರ್ಣಿಕಾ ನದಿ ಸಮೀಪ ಪತ್ತೆಯಾಗಿವೆ. ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೋಕೋ ತಂಡದಿಂದಲೂ ಸಾಕ್ಷ್ಯ ಸಂಗ್ರಹಿಸಲಾಗಿದೆ. ಘಟನೆ ಸಂಬಂಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

