Breaking News

ಶಿಡ್ಲಘಟ್ಟ: ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ: ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಸತಿ ಶಾಲೆಯ ಪ್ರಾಂಶುಪಾಲ ಈಶ್ವರ್ ರೆಡ್ಡಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಓದು ಬರಹ ಕಲಿಸುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕೊಠಡಿಗೆ ಕರೆಸಿಕೊಳ್ಳುತ್ತಿದ್ದ ಪ್ರಾಂಶುಪಾಲರು, ಆಕೆಯ ವಿರೋಧದ ನಡುವೆಯೂ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ದಿಬ್ಬೂರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಸಂತ್ರಸ್ತ ಬಾಲಕಿಗೆ ಬಾಲಕಿಯರ ಬಾಲಮಂದಿರದಲ್ಲಿ ಆಶ್ರಯ ಕಲ್ಪಿಸಲಾಗಿದೆ.

Share News

About BigTv News

Check Also

ಸಾಲದ ವಿಚಾರಕ್ಕೆ ಪತಿ-ಪತ್ನಿ ಕಲಹ : ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಕಲಬುರಗಿ: ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ನಡುವೆ ನಡೆದ ಕಲಹ ದುರಂತಕ್ಕೆ ಕಾರಣವಾಗಿದ್ದು, ತಾಯಿ ತನ್ನ ಇಬ್ಬರು ಪುತ್ರಿಯರೊಂದಿಗೆ ಬಾವಿಗೆ …

Leave a Reply

Your email address will not be published. Required fields are marked *